×
Ad

ಟರ್ಕಿಯಲ್ಲಿ ಭಯೋತ್ಪಾದಕ ದಾಳಿ | ನಾಲ್ವರು ನಾಗರಿಕರ ಹತ್ಯೆ

Update: 2024-10-23 22:24 IST

PC : NDTV 

ಹೊಸದಿಲ್ಲಿ : ಅಂಕಾರಾ ಬಳಿಯ ಟರ್ಕಿಯ ಉನ್ನತ ರಕ್ಷಣಾ ಸಂಸ್ಥೆ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ಪ್ರಧಾನ ಕಚೇರಿಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಟರ್ಕಿಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ವ್ಲಾದಿಮಿರ್ ಪುಟಿನ್ ಅವರೊಂದಿಗೆ ರಷ್ಯಾದಲ್ಲಿ ಮಾತುಕತೆ ನಡೆಸುತ್ತಿದ್ದ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದಾಳಿಯನ್ನು ದೃಢಪಡಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ನಲ್ಲಿ ಘೋರ ಭಯೋತ್ಪಾದಕ ದಾಳಿ ನಡೆದಿದೆ ಎಂದು ಅವರು ಖಂಡಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ದಾಳಿಕೋರರಲ್ಲಿ ಓರ್ವ ಮಹಿಳೆಯೂ ಸೇರಿದ್ದಾರೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಹೇಳಿದ್ದಾರೆ.

ದಾಳಿಕೋರರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದ ಅವರು, ದಾಳಿಯಲ್ಲಿ ಭಾಗಿಯಾದವರು ಇಬ್ಬರೇ ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ದಾಳಿಕೋರರು ಇದ್ದಾರೆಯೇ ಎಂಬುದರ ಕುರಿತು ಮಾಹಿತಿ ನೀಡಿಲಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News