ಹೊಸದಿಲ್ಲಿ: ಹಾರ್ಮುಝ್ ಜಲಸಂಧಿಯ ಮೂಲಕ ಸಂಚರಿಸುವಾಗ ನ್ಯಾವಿಗೇಷನ್ ಮತ್ತು ಕಣ್ಗಾವಲು ವ್ಯವಸ್ಥೆಗಳನ್ನು ಸ್ಥಗಿತಗೊಳಿಸುವ ಹಡಗುಗಳನ್ನು ‘ಶತ್ರು’ ಎಂದು ಪರಿಗಣಿಸಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಎಚ್ಚರಿಕೆ ನೀಡಿದೆ. ಇಂತಹ ಹಡಗುಗಳ ವಿರುದ್ಧ ‘ಕಠಿಣ ಮತ್ತು ನಿರ್ಣಾಯಕ ಕ್ರಮ’ ಕೈಗೊಳ್ಳಲಾಗುವುದು ಎಂದೂ ಸ್ಪಷ್ಟಪಡಿಸಿದೆ.

‘ತಸ್ನಿಮ್’ ಸುದ್ದಿ ಸಂಸ್ಥೆ ಪ್ರಕಟಿಸಿರುವ ಐಆರ್‌ಜಿಸಿ ಹೇಳಿಕೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

‘ಅನಧಿಕೃತ’ ಮಾರ್ಗದ ಮೂಲಕ ಹಾರ್ಮುಝ್ ಜಲಸಂಧಿಯಿಂದ ಹೊರಬರಲು ಪ್ರಯತ್ನಿಸುತ್ತಿದ್ದ ಸೂಪರ್ ಟ್ಯಾಂಕರ್‌ವೊಂದು ನೌಕಾ ಸ್ಫೋಟಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಐಆರ್‌ಜಿಸಿ ಹೇಳಿಕೆ ನೀಡಿದ ಕೆಲವೇ ನಿಮಿಷಗಳಲ್ಲಿ ಈ ಎಚ್ಚರಿಕೆ ಹೊರಬಿದ್ದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor