ಅಬುಧಾಬಿ| ವಾಯು ರಕ್ಷಣಾ ವ್ಯವಸ್ಥೆ ತಡೆದ ಕ್ಷಿಪಣಿಯ ಅವಶೇಷಗಳು ಬಿದ್ದು ಇಬ್ಬರಿಗೆ ಗಾಯ
Update: 2026-03-09 14:37 IST
File Photo: PTI
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ನ ಮೇಲೆ ಇರಾನ್ ನಿಂದ ನಡೆದ ಕ್ಷಿಪಣಿ ದಾಳಿಯನ್ನು, ವಾಯು ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿ ತಡೆಯಿತು. ಆ ವೇಳೆ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಬುಧಾಬಿಯಲ್ಲಿನ ಅಧಿಕಾರಿಗಳನ್ನು ಉಲ್ಲೇಖಿಸಿ aljazeera.com ವರದಿ ಮಾಡಿದೆ.
ಮೊದಲ ಘಟನೆಯಲ್ಲಿ ಜೋರ್ಡಾನ್ ಪ್ರಜೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡನೇ ಘಟನೆಯಲ್ಲಿ ಈಜಿಪ್ಟ್ ಪ್ರಜೆಯೊಬ್ಬರಿಗೆ ಗಾಯಗಳಾಗಿದೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ತಿಳಿಸಿದೆ.
ಕ್ಷಿಪಣಿಯನ್ನು ವಾಯು ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿ ತಡೆದ ನಂತರ ಅದರ ಅವಶೇಷಗಳು ನೆಲಕ್ಕೆ ಬಿದ್ದ ಪರಿಣಾಮ ಈ ಘಟನೆಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮ ಕಚೇರಿ ಮಾಹಿತಿ ನೀಡಿದೆ.