×
Ad

ಬ್ರಿಟನ್ ರೈಲಿನಲ್ಲಿ ದಾಳಿ | ಹಲವು ಮಂದಿಗೆ ಇರಿತ : ಇಬ್ಬರು ಶಂಕಿತರ ಬಂಧನ

Update: 2025-11-02 08:24 IST

PC | timesofindia

ಲಂಡನ್ : ಪೂರ್ವ ಇಂಗ್ಲೆಂಡಿನ ಕ್ಯಾಂಬ್ರಿಡ್ಜ್ ಶೈರ್ ರೈಲಿನಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಹಲವು ಮಂದಿಗೆ ಇರಿದ ಪ್ರಕರಣ ವರದಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ತುರ್ತು ಸ್ಪಂದನಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಎಲ್ಲ ರೈಲು ಸೇವೆಗಳನ್ನು ರದ್ದುಪಡಿಸಲಾಗಿದ್ದು, ಈ ಸಂಬಂಧ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.

ಬ್ರಿಟಿಷ್ ಸಾರಿಗೆ ಪೊಲೀಸರು ಈ ಘಟನೆಯನ್ನು ಎಕ್ಸ್ ನಲ್ಲಿ ದೃಢಪಡಿಸಿದ್ದು, ಹುಟಿಂಗ್ಡನ್‍ ಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದ ಅವಘಡದಲ್ಲಿ ಹಲವು ಮಂದಿಗೆ ಇರಿದ ಘಟನೆಗೆ ಸಂಬಂಧಿಸಿದಂತೆ ತುರ್ತು ಸ್ಪಂದನೆ ನಡೆದಿದೆ. ಇಬ್ಬರನ್ನು ಬಂಧಿಸಲಾಗಿದೆ" ಎಂದು ಸ್ಪಷ್ಟಪಡಿಸಿದೆ.

ಕ್ಯಾಂಬ್ರಿಡ್ಜ್ ಶೈರ್ ಪೊಲೀಸರ ಪ್ರಕಾರ ಹಲವು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸಂತ್ರಸ್ತರು ಯಾವ ಸ್ಥಿತಿಯಲ್ಲಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಿಲ್ಲ. ಘಟನೆ ನಡೆದ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದ್ದು, ಎಲ್ಲ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ತುರ್ತು ಸ್ಪಂದನಾ ತಂಡಗಳು ಕಾರ್ಯಾಚರಣೆ ನಡೆಸಿವೆ.

ಘಟನೆ ಹಿನ್ನೆಲೆಯಲ್ಲಿಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಮುಖ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರಯಾಣ ಕೈಗೊಳ್ಳದಂತೆ ಪೂರ್ವ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ರೈಲು ಸೇವೆಗಳನ್ನು ನಿರ್ವಹಿಸುತ್ತಿರುವ ಲಂಡನ್ ನಾರ್ತ್ ಈಸ್ಟರ್ನ್ ರೈಲ್ವೆ ಮನವಿ ಮಾಡಿದೆ. ಈ ದಾಳಿಯ ಹಿಂದಿನ ಉದ್ದೇಶ ಇನ್ನೂ ದೃಢಪಟ್ಟಿಲ್ಲ ಹಾಗೂ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News