ಸಾಂದರ್ಭಿಕ ಚಿತ್ರ | Photo Credit : PTI

ಕೀವ್: ಉಕ್ರೇನ್‍ನ ಕೀವ್ ಪ್ರದೇಶದ ಮೇಲೆ ರವಿವಾರ ರಾತ್ರಿ ನಡೆದ ರಶ್ಯದ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದು, ಭಾಗಶಃ ಕುಸಿದಿರುವ ವಸತಿ ಸಮುಚ್ಚಯದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ನಿವಾಸಿಗಳನ್ನು ಪತ್ತೆಹಚ್ಚಲು ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಕೀವ್ ಪ್ರದೇಶದ ಡೈಮರ್ ನಗರದ ಮೇಲೆ ನಡೆದ ದಾಳಿಯು ಐದು ಅಂತಸ್ತಿನ ಕಟ್ಟಡಕ್ಕೆ ಅಪ್ಪಳಿಸಿದ್ದು, ಮಹಿಳೆ ಸೇರಿದಂತೆ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ. ಒಂದು ಮಗುವನ್ನು ಕಟ್ಟಡದ ಅವಶೇಷಗಳಡಿಯಿಂದ ಜೀವಂತ ಹೊರತೆಗೆಯಲಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 11 ಜನರು ನಾಪತ್ತೆಯಾಗಿದ್ದಾರೆ ಎಂದು ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ವಿಶ್ನೆವ್‍ನಲ್ಲಿರುವ ಸೂಪರ್‌ಮಾರ್ಕೆಟ್‌ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಿಲಾ ಟ್ಸೆಕ್ರ್ವಾದಲ್ಲಿ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದೆ . ಡ್ನಿಪ್ರೊಪೆಟ್ರೋವ್ಸ್ಕ್ ಪ್ರದೇಶದ ವಿದ್ಯುತ್ ಉಪಕೇಂದ್ರದ ಮೇಲೂ ರಶ್ಯಾ ದಾಳಿ ನಡೆಸಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor