Vietnam | ಆಹಾರದ ಅಂಗಡಿಯಲ್ಲಿ ಸ್ಫೋಟ: 6 ಮಂದಿ ಸಾವು
Photo Credit : AP
ಹನೋಯ್, ನ.24: ಮಂಗಳವಾರ ವಿಯೆಟ್ನಾಂ ರಾಜಧಾನಿ ಹನೋಯ್ ನ ಆಹಾರದ ಅಂಗಡಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಜನನಿಬಿಡ ಡಾಂಗ್ ಡಾ ರಸ್ತೆಯಲ್ಲಿರುವ ಅಂಗಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಇದರಿಂದ ಕಟ್ಟಡಕ್ಕೆ ಭಾರಿ ಹಾನಿಯಾಗಿದ್ದು, ಸುತ್ತಮುತ್ತಲಿನ ಕಟ್ಟಡಗಳ ಕಿಟಕಿ ಗಾಜುಗಳು ಪುಡಿಯಾಗಿವೆ. 15 ಮೀಟರ್ ವ್ಯಾಪ್ತಿಯಲ್ಲಿದ್ದ ಸುಮಾರು 10 ಮನೆಗಳಿಗೂ ಹಾನಿಯಾಗಿದೆ. ಅಡುಗೆ ಅನಿಲದಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ವಿಯೆಟ್ನಾಂನ ಸಾರ್ವಜನಿಕ ಭದ್ರತಾ ಸಚಿವಾಲಯ ಹೇಳಿದೆ.