ಪಿಒಕೆಯಲ್ಲಿ ಭುಗಿಲೆದ್ದ ಹಿಂಸಾಚಾರ : 14 ಮಂದಿ ಮೃತ್ಯು, ಪರಿಸ್ಥಿತಿ ಉದ್ವಿಗ್ನ

Update: 2026-07-28 20:59 IST

Photo Credit  : NDTV 

ರಾವಲಾಕೋಟ್, ಜು.28: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ರಾವಲಾಕೋಟ್‍ನಲ್ಲಿ ಚುನಾವಣೆ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ.

ರಾವಲಾಕೋಟ್‍ನ ಡ್ರೇಕ್ ಈದ್ಗಾ ಪ್ರದೇಶದಲ್ಲಿ ಸೋಮವಾರ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿನ ಹೆಚ್ಚಿನ ಸಂಖ್ಯೆಯ ನಿವಾಸಿಗಳು ಚುನಾವಣೆಯನ್ನು ಬಹಿಷ್ಕರಿಸಿ ಪ್ರತಿಭಟನೆಗೆ ಜಮಾಯಿಸಿದ್ದರು. ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿ, ಪಂಜಾಬ್ ರೇಂಜರ್ಸ್ ಮತ್ತು ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ನೇರ ಮದ್ದುಗುಂಡುಗಳು, ಸುದೀರ್ಘ ವ್ಯಾಪ್ತಿಯ ಅಶ್ರುವಾಯು ಹಾಗೂ ಪ್ರಮುಖ ಸ್ಥಳಗಳಲ್ಲಿ ಸ್ನೈಪರ್‌ ಗಳನ್ನು ಬಳಸಿದ್ದಾರೆ ಎಂದು `ಜಮ್ಮು ಕಾಶ್ಮೀರ ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ' (ಜೆಕೆಜೆಎಎಸಿ) ಮತ್ತು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕಾರಿಗಳು ಸಂಪರ್ಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದು, ಪ್ರಾದೇಶಿಕವಾಗಿ ಮೊಬೈಲ್ ಸೇವೆಗಳು, ಇಂಟರ್ನೆಟ್ ಸಂಪರ್ಕ ಮತ್ತು ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News