ಭಾರತ-ಪಾಕ್ ನಡುವಿನ ಯುದ್ಧ ನಿಲ್ಲಿಸಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ಬಯಸುವುದಿಲ್ಲ: ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (PTI)
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಶಾಂತಿಗೆ ಮಧ್ಯಸ್ಥಿಕೆ ವಹಿಸಿರುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಪುನರುಚ್ಚರಿಸಿದ್ದಾರೆ. ಆದರೆ, ಈ ಕಾರಣಕ್ಕೆ ನಾನು ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್ ಸೋಷಿಯಲ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಜಾಗತಿಕ ಸಂಘರ್ಷಗಳನ್ನು ಪರಿಹರಿಸುವಲ್ಲಿ ತನ್ನ ಪಾತ್ರದ ಬಗ್ಗೆ ಉಲ್ಲೇಖಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನಾನು ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ.
ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ. ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿಯನ್ನು ಕಾಪಾಡಿದ್ದಕ್ಕಾಗಿ ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
ನಾನು ಏನೇ ಮಾಡಿದರೂ, ರಷ್ಯಾ-ಉಕ್ರೇನ್, ಇಸ್ರೇಲ್-ಇರಾನ್ ಸೇರಿದಂತೆ ಆ ಫಲಿತಾಂಶಗಳು ಏನೇ ಇರಲಿ, ನಾನು ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ನಡುವೆ ವಾಷಿಂಗ್ಟನ್‌ನಲ್ಲಿ ನಡೆದ ಶಾಂತಿ ಒಪ್ಪಂದದ ಬಗ್ಗೆ ಉಲ್ಲೇಖಿಸುತ್ತಾ, ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬಯಸುವುದಿಲ್ಲ ಎಂದು ಹೇಳಿದ್ದಾರೆ.