×
Ad

ಕಲಬುರಗಿ | ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ರಾಜ್ಯ ಸರಕಾರ ಅಸ್ತು

Update: 2025-09-17 10:45 IST

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 'ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ' ಸೃಜಿಸಿ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ಕಲ್ಯಾಣ ಕರ್ನಾಟಕದ ಬಹುಕಾಲದ ಬೇಡಿಕೆಯಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ, ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಆದೇಶಿಸಲಾಗಿದೆ.

ಮುಂದುವರಿದು, ಪ್ರದೇಶದಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಯ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ ಏಳು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ವರ್ಷ ಕಲಬುರಗಿಯಲ್ಲಿ ಸೆ.17ರಂದ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News