ಛಲವಾದಿ ನಾರಾಯಣಸ್ವಾಮಿಗೆ ಜೀವ ಬೆದರಿಕೆ ಆರೋಪ: ಆರೋಪಿಯ ತಕ್ಷಣದ ಬಂಧನಕ್ಕೆ ಆಗ್ರಹ
Update: 2026-01-09 14:20 IST
ಕಲಬುರಗಿ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ, ಸೇಡಂ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಫೇಸ್‌ಬುಕ್‌ನ ‘ವೆಂಕಟೇಶ್ ಅಪ್ಪು’ ಎಂಬ ಐಡಿ ಮೂಲಕ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಬಳಿಕ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಓಂಪ್ರಕಾಶ್ ಪಾಟೀಲ್, ರಾಜು ಕಟ್ಟಿ ಮಳಖೇಡ, ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷರಾದ ರಾಮು ಕಣ್ಣಿಕಲ್, ಪ್ರಧಾನ ಕಾರ್ಯದರ್ಶಿ ವಿಷ್ಣು ಉಡಗಿ, ಸಿದ್ದು ಉಡಗಿ, ಮಹಾವೀರ ಅಳ್ಳೊಳ್ಳಿ, ಸಿದ್ದಲಿಂಗ ನಿಡಗುಂದಿ, ಹಣಮಂತ ಭರತನೂರ ಸೇರಿ ಮತ್ತಿತರರು ಭಾಗವಹಿಸಿದ್ದರು.