ಕಲಬುರಗಿ: ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ದೇವಪ್ಪ ಕಮಕನೂರ ನೇಮಕ
Update: 2026-01-13 15:57 IST
ಕಲಬುರಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ದೇವಪ್ಪ ಕಮಕನೂರ ಅವರನ್ನು ನೇಮಕಗೊಂಡಿದ್ದಾರೆ.
ಈ ಕುರಿತು ಒಕ್ಕೂಟ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ಹೊರಡಿಸಿದ್ದು, ಯುವ ಸಂಘಗಳ ಒಕ್ಕೂಟವು ಯುವಜನರಲ್ಲಿ ಸೇವಾ ಮನೋಭಾವ, ಗ್ರಾಮ ನೈರ್ಮಲ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಾ ಬಂದಿದೆ. ಮುಂಬರುವ ದಿನಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ದೇವಪ್ಪ ಕಮಕನೂರ ಅವರನ್ನು ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೂಡಲೇ ಜಿಲ್ಲಾ ಒಕ್ಕೂಟ ರಚಿಸಿ 10 ಸದಸ್ಯರ ಪಟ್ಟಿಯನ್ನು ಅನುಮೋದನೆಗಾಗಿ ಕಳುಹಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.