ಕಲಬುರಗಿ | ಜಗಜೀವನ್ ರಾಮ್ ಪುಣ್ಯಸ್ಮರಣೆ
Update: 2026-07-06 15:00 IST
ಕಲಬುರಗಿ: ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿ ನಗರದಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು.
ನಂತರ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್ ಸಿ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಿಕಾ ಪರಮೇಶ್ವರ್, ಪ್ರವೀಣ್ ಹರವಾಳ, ಡಾ.ಕಿರಣ್ ದೇಶಮುಖ್ ಸೇರಿದಂತೆ ಮತ್ತಿತರಿದ್ದರು.