×
Ad

ಕಲಬುರಗಿ: 2 ವರ್ಷದ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

Update: 2024-02-14 18:09 IST

ಕಲಬುರಗಿ: ಎರಡು ವರ್ಷದ ಹೆಣ್ಣು ಮಗುವನ್ನು ನೇಣಿಗೆ ಹಾಕಿ, ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ತಾಯಿ ಶಿವಲೀಲಾ (24) ಹಾಗೂ ಮಗಳು ವರ್ಷಿತಾ(2) ಮೃತಪಟ್ಟವರು. ಫೆ.13ರ ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ತಾಯಿ ಮೊದಲು ಮಗುವಿಗೆ ನೇಣು ಹಾಕಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ತಾಯಿ, ಮಗುವಿನ ಮೃತದೇಹ ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಂಚೋಳಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಂಡ ಆನಂದ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News