×
Ad

ಆಂಧ್ರಪ್ರದೇಶ ಬಸ್ ದುರಂತ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ

Update: 2025-10-24 12:24 IST

ಕಲಬುರಗಿ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದ ಬಸ್ ದುರಂತಕ್ಕೆ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ " ಎಕ್ಸ್ " ಖಾತೆಯಲ್ಲಿ ಘಟನೆಯ ಕುರಿತಂತೆ ಸಂತಾಪ ವ್ಯಕ್ತಪಡಿಸಿರುವ ಅವರು, ಆಂಧ್ರಪ್ರದೇಶದ ಕರ್ನೂಲಿನಲ್ಲಿ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಬೆಂಕಿಗಾಹುತಿಯಾಗಿ ಅಮೂಲ್ಯ ಜೀವಗಳು ಬಲಿಯಾಗಿರುವುದು ತೀವ್ರ ದುಃಖಕರವಾಗಿದೆ ಎಂದಿದ್ದಾರೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ ಪ್ರಯಾಣಿಕರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ಇಂತಹ ದುರಂತಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ  ಸೂಕ್ತ ಕ್ರಮದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News