ಆಳಂದ ಕ್ಷೇತ್ರಕ್ಕೆ ಕುಡಿಯುವ ನೀರಿಗಾಗಿ 1 ಕೋಟಿ ರೂ. ಅನುದಾನ : ಸಚಿವ ಈಶ್ವರ ಖಂಡ್ರೆ

Update: 2026-08-20 22:48 IST

ಕಲಬುರಗಿ: ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತದಿಂದ ಆಳಂದ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರು ಪೂರೈಕೆಗಾಗಿ ಸರ್ಕಾರದಿಂದ 1 ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು  ಸಚಿವ ಈಶ್ವರ ಖಂಡ್ರೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  

ವಿಧಾನಸಭೆಯಲ್ಲಿ ಶಾಸಕ ಬಿ.ಆರ್ ಪಾಟೀಲ್ ಅವರ  ಪ್ರಶ್ನೆಗೆ  ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಈಶ್ವರ ಖಂಡ್ರೆ, ಕಲಬುರಗಿ ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರು ಪೂರೈಕೆಗಾಗಿ 5 ಕೋಟಿ ಅನುದಾನ ನೀಡಲಾಗಿದ್ದು, ಒಟ್ಟಾರೆ ತುರ್ತು ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ 3.53 ಕೋಟಿಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಅದರಂತೆ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆಳಂದ ತಾಲ್ಲೂಕಿನಲ್ಲಿ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 69.50 ಲಕ್ಷ ಮೊತ್ತದಲ್ಲಿ 42 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 33 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ.  

ಇದಲ್ಲದೆ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಜುಲೈ 31ರಂದು ಆಳಂದ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದಿಂದ ಹೆಚ್ಚುವರಿಯಾಗಿ 1 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಟ್ಯಾಂಕರ್‌ ಹಾಗೂ ಇತರ ಪರ್ಯಾಯ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮುಂದುವರಿಸಲಾಗಿದೆ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News