×
Ad

ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ : ಕಲಬುರಗಿ ಜಿಲ್ಲಾಡಳಿತದ ಕಾರ್ಯಕ್ಕೆ ಮುಖ್ಯ ಕಾರ್ಯದರ್ಶಿಯಿಂದ ಪ್ರಶಂಸೆ

Update: 2025-06-30 22:27 IST

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಲಬುರಗಿ ಜಿಲ್ಲಾಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿರುವುದನ್ನು ಗಮನಿಸಿ ಪ್ರಶಂಸನಾ ಪತ್ರವನ್ನು ಹೊರಡಿಸುವಂತೆ ಸಿ.ಎಂ.‌ ಸೂಚಿಸಿದ್ದಾರೆ‌ ಎಂದು ಉಲ್ಲೇಖಿಸಿ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ.

ಉತ್ತಮ ಪ್ರಗತಿ ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ದತಿಗೆ ಶ್ಲಾಘನೆ ಸಲ್ಲಬೇಕು. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದಿದ್ದಾರೆ.

ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಉತ್ಸಾಹದಿಂದ ಕಾರ್ಯನಿರ್ವಹಣೆಯನ್ನು ನಿರೀಕ್ಷಿಸಲಾಗಿದ್ದು, ಪ್ರಗತಿ ಪಥದಲ್ಲಿ ತಮ್ಮ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ. ಈ ವಿಶಿಷ್ಠ ಸಾಧನೆಗೆ ಕಾರಣವಾದ ತಮಗೂ, ಜಿಲ್ಲೆಯ ಎಲ್ಲಾ ಅಧಿಕಾರಿ-ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಡಾ.ಶಾಲಿನಿ ರಜನೀಶ್ ಅವರು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News