×
Ad

ಎ.16 ರಂದು ಕಲಬುರಗಿಯಲ್ಲಿ ಉದ್ಯೋಗ‌ ಮೇಳ; 300 ಕಂಪನಿಗಳು ಭಾಗಿ

Update: 2025-04-13 00:09 IST

ಕಲಬುರಗಿ: ಇದೇ ಎಪ್ರಿಲ್ 16 ರಂದು ಕಲಬುರಗಿ ನಗದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಬೃಹತ್ ಉದ್ಯೋಗ ಮೇಳಕ್ಕೆ ಆಗಮಿಸಲು ಇದುವರೆಗೆ 300 ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗುಬಾಯಿ ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕಲಬುರಗಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಿಲಾಗಿರುವ ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಅಂದಿ ಬೆಳಿಗ್ಗೆ 9 ರಿಂದ ಸಾಯಂಕಾಲ 5 ಗಂಟೆ ವರೆಗೆ ಜರುಗಲಿದ್ದು, ಉದ್ಯೋಗ ಬಯಸಿ ಇಲ್ಲಿಯವರೆಗೆ ಸುಮಾರು 16,256 ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ‌ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಸೇರಿದಂತೆ ಪ್ರದೇಶದ ಶಾಸಕರು-ಸಂಸದರು ಹಾಗೂ ಇತರೆ‌ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 8073416938 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News