×
Ad

ಜೂನ್ 13ರಂದು ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ 6ನೇ ಘಟಿಕೋತ್ಸವ

Update: 2026-06-08 21:35 IST

ಕಲಬುರಗಿ: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ 6ನೇ ಘಟಿಕೋತ್ಸವ ಇದೇ ಜೂನ್ 13ರಂದು ಸಂಜೆ 4.30ಕ್ಕೆ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಕಾಲೇಜಿನ ಆವರಣದಲ್ಲಿ ಜರುಗಲಿದೆ.

ಘಟಿಕೋತ್ಸವದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್‌ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಮುಂಬೈನ ಅಡ್ರಿನಾಲಿನ್ ಮೆಡ್‌ಎಡ್ ಸಂಸ್ಥಾಪಕ ಡಾ. ವಿಶಾಲ ಗಬಾಲೆ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಉಮೇಶ್ ಎನ್.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್ ಸಿ.ಆರ್., ಪ್ರಾಚಾರ್ಯರಾದ ಡಾ. ಅಜಯ ಕುಮಾರ್‌ ಜಿ ಹಾಗೂ ಹಣಕಾಸು ಸಲಹೆಗಾರರು ಮತ್ತು ಪ್ರಭಾರಿ ಸಿ.ಎ.ಓ. ಭಾರತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News