Afzalpur | ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಶ್ರೀಕಾಂತ ಕಾಚಾಪೂರ, ಕಾರ್ಯದರ್ಶಿಯಾಗಿ ಕಾಲೇಸಾಬ ಭಾಗವಾನ್ ಆಯ್ಕೆ

Update: 2026-08-12 17:35 IST

ಅಫಜಲಪುರ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಬಡ್ತಿ ಪಡೆದ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಜೇವರ್ಗಿ ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ ಕಾಚಾಪೂರ ಹಾಗೂ ಕಾರ್ಯದರ್ಶಿಯಾಗಿ ಗೌರ ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕಾಲೇಸಾಬ ಭಾಗವಾನ್ ಆಯ್ಕೆಯಾಗಿದ್ದಾರೆ.

ಆ. 9ರಂದು ನಡೆದ ಚುನಾವಣೆಯಲ್ಲಿ ಇಬ್ಬರೂ ಭರ್ಜರಿ ಗೆಲುವು ಸಾಧಿಸಿದರು.

ಗೆಲುವಿನ ಬಳಿಕ ಮಾತನಾಡಿದ ಅಧ್ಯಕ್ಷ ಶ್ರೀಕಾಂತ ಕಾಚಾಪೂರ, ಮುಖ್ಯ ಶಿಕ್ಷಕರು ಎದುರಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ–ಬಾಳೆಹಣ್ಣು ಖರೀದಿ, ಮಕ್ಕಳ ನಿರಂತರ ಹಾಜರಾತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿಹರಿಸಲು ಸಂಘ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಮುಖ್ಯ ಶಿಕ್ಷಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಮೂಲಕ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಹಾಗೂ ಮುಖ್ಯ ಶಿಕ್ಷಕರು ತೃಪ್ತಿದಾಯಕವಾಗಿ ಸೇವೆ ಸಲ್ಲಿಸಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಪರಾಭವಗೊಂಡ ಮಣ್ಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಪೂಜಾರಿ ಅವರನ್ನು ಸಂಘದ ಗೌರವಾಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕ.ರಾ.ಸ.ನೌ.ಸಂಘದ ಅಧ್ಯಕ್ಷ ಸಂಜಯಕುಮಾರ ಬಗಲಿ, ಕ.ರಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಸಂಗೂ ಮ್ಯಾಳೇಸಿ, ವಿವಿಧ ಸಂಘಗಳ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News