ಅಫಜಲಪುರ | 55 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಜೆ.ಎಂ. ಕೊರಬು

Update: 2026-07-30 21:35 IST

ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ. ಕೊರಬು ತೀವ್ರ ಕಳವಳ ವ್ಯಕ್ತಪಡಿಸಿದರು.

ಅಫಜಲಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಅವರು, ಮಕ್ಕಳ ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಂತರ ಕಲಬುರಗಿ–ಅಫಜಲಪುರ ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

"ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಹಾಗೂ ಕಲಬೆರಕೆ ಆಹಾರ ನೀಡಿರುವುದು ಅತ್ಯಂತ ಖಂಡನೀಯ. ಈ ಪ್ರಕರಣದಲ್ಲಿ ಬೇಜವಾಬ್ದಾರಿ ತೋರಿದ ಪ್ರಾಂಶುಪಾಲ ಹಾಗೂ ವಾರ್ಡನ್ ಅವರನ್ನು ತಕ್ಷಣವೇ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ವಸತಿ ಶಾಲೆಗೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಿದ ಗುತ್ತಿಗೆದಾರರ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸಿ.

-ಜೆ.ಎಂ.ಕೊರಬು ( ರಾಜ್ಯ ಉಪಾಧ್ಯಕ್ಷರು ಕೆಪಿಸಿಸಿ ಹಿಂದುಳಿದ ವರ್ಗಗಳ ಬೆಂಗಳೂರು)

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News