×
Ad

ಅಫಜಲಪುರ | ಅನನ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Update: 2026-01-09 12:39 IST

ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹತ್ತಿರ ಇರುವ ಅನನ್ಯ ಆಸ್ಪತ್ರೆಗೆ ಗುರುವಾರ ಸಂಜೆ ಸುಮಾರು 7:00 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿಯಿಂದ ಆಸ್ಪತ್ರೆಯೊಳಗಿನ ಔಷಧ ಮಳಿಗೆ, ಫರ್ನಿಚರ್, ಫ್ರಿಜ್ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಂದಾಜು ಲಕ್ಷಕ್ಕೂ ಅಧಿಕ ರೂಪಾಯಿ ಮೌಲ್ಯದ ಹಾನಿ ಸಂಭವಿಸಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಅಕ್ಕಪಕ್ಕದ ಮನೆಯವರು ಹಾಗೂ ಗ್ರಾಮಸ್ಥರು ಧಾವಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತವಾಗದಂತೆ ತಡೆದಿದ್ದಾರೆ. ಆದರೆ, ಬೆಂಕಿ ನಂದಿಸಿದ ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯ ವಿರುದ್ದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆಳಂದ ಡಿವೈಎಸ್ಪಿ ತಮ್ಮರಾವ್ ಗೌಡ್ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News