ಅಫಜಲಪುರ: 2026–27ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದ 200 ಮೀಟರ್ ಓಟ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಫಜಲಪುರ ತಾಲೂಕಿನ ಹವಳಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು. ಸೃಷ್ಟಿ ಪೂಜಾರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಶಾಲೆ ಹಾಗೂ ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ.

ಕಲಬುರಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸೃಷ್ಟಿ ಪೂಜಾರಿ ಗಮನಾರ್ಹ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಅವರ ಈ ಸಾಧನೆಯು ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರೂ ತಮ್ಮ ಪ್ರತಿಭೆಯ ಮೂಲಕ ಉನ್ನತ ಮಟ್ಟ ತಲುಪಬಹುದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಸೃಷ್ಟಿ ಪೂಜಾರಿ ಅವರ ಸಾಧನೆಗೆ ಶಾಲೆಯ ಮುಖ್ಯಗುರುಗಳು, ಶಿಕ್ಷಕರ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರು ಮತ್ತು ಸದಸ್ಯರು, ಪಾಲಕ-ಪೋಷಕರು, ಕ್ರೀಡಾಪ್ರೇಮಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಪರಮೇಶ್ವರ ಜಮಾದಾರ, ದೈಹಿಕ ಶಿಕ್ಷಕ ಶೀಲಸಿದ್ದ ಹೂಗಾರ, ಸಂತೋಷ ಚವ್ಹಾಣ, ಜಗದೀಶ್ ಹಳ್ಯಾಳ್, ಶ್ರೀಶೈಲ ಜಗದಿ, ರಾಜು ಕಂಬಾರ, ಮಲ್ಲಿಕಾರ್ಜುನ ಆವೇರಿ, ಸೌಭಾಗ್ಯವತಿ ದೊಡ್ಮನಿ, ನೀಲಮ್ಮ ಪದಕಿ, ಜಯಶ್ರೀ ಸೊನ್ನ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor