ಅಫಜಲಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲ ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ಎಸಗುತ್ತಿದ್ದಾರೆ ಎಂದು ಕರುನಾಡ ವಿಜಯ ಸೇನೆ ತಾಲೂಕು ಅಧ್ಯಕ್ಷ ಸಿದ್ದರಾಮ ಸುಲ್ತಾನಪುರ ಆರೋಪಿಸಿದ್ದಾರೆ.

ಕೆಲವರು ಬೆಳಿಗ್ಗೆ ತಡವಾಗಿ ಆಸ್ಪತ್ರೆಗೆ ಆಗಮಿಸಿ, ಮಧ್ಯಾಹ್ನವೇ ತೆರಳುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಲ್ಲದೆ, ಕ್ಯಾಮ್ಸ್ ಹಾಜರಾತಿ ವ್ಯವಸ್ಥೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಸರ್ಕಾರದಿಂದ ಲಕ್ಷಾಂತರ ರೂಪಾಯಿ ವೇತನ ಪಡೆಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯದಲ್ಲಿ ಕರ್ತವ್ಯ ನಿರ್ವಹಿಸಬೇಕು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ತವ್ಯಲೋಪದ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮ ಸುಲ್ತಾನಪುರ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor