×
Ad

ಅಫಜಲಪುರ | ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಲ್ಯಾಬ್ ಚಟುವಟಿಕೆ ಆರೋಪ: ಡಿಎಚ್‌ಒ ದಿಢೀರ್ ಪರಿಶೀಲನೆ

Update: 2026-06-13 21:37 IST

ಅಫಜಲಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿ ಖಾಸಗಿ ಪ್ರಯೋಗಾಲಯಗಳಿಂದ ವರದಿ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ವಿವೇಕಾನಂದ ರೆಡ್ಡಿ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ರೋಗಿಗಳಿಂದ ಯಾವುದೇ ರೀತಿಯ ಹಣ ವಸೂಲಿ ಮಾಡಬಾರದು ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವ ಪರೀಕ್ಷೆಗಳಿಗೆ ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳನ್ನು ಕಳುಹಿಸಬಾರದು ಎಂದು ವೈದ್ಯರು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಖಾಸಗಿ ಲ್ಯಾಬ್‌ಗಳ ಚಟುವಟಿಕೆ ಕುರಿತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ವಿವೇಕಾನಂದ ರೆಡ್ಡಿ ತಿಳಿಸಿದರು.

ಇದೇ ವೇಳೆ ಆಸ್ಪತ್ರೆಯ ವೈದ್ಯರ ಕಾರ್ಯವೈಖರಿ ಕುರಿತು ಸಾರ್ವಜನಿಕರು ಕೆಲವು ದೂರುಗಳನ್ನು ಸಲ್ಲಿಸಿದ್ದು, ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News