Afzalpur | 10 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2026-08-19 19:08 IST

ಅಫಜಲಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಫಜಲಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 5 ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಕಳವಟ್ಟಿ, ದೇವಲಗಾಣಗಾಪುರ–1, ಚೌಡಾಪುರ–1, ಗೋಬ್ಬುರ ಬಿ–6 ಹಾಗೂ ಘತ್ತರಗಾ–1 ಅಂಗನವಾಡಿ ಕೇಂದ್ರಗಳಲ್ಲಿ ತಲಾ ಒಂದು ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆ ಖಾಲಿ ಇವೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷಗಳೊಳಗಿರಬೇಕು. ಸಂಬಂಧಪಟ್ಟ ಅಂಗನವಾಡಿ ಕೇಂದ್ರದ ವ್ಯಾಪ್ತಿಯ ಸ್ಥಳೀಯ ನಿವಾಸಿಗಳಾಗಿರಬೇಕು. ವಿಧವೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

ಆ.18ರಿಂದ ಆ.31ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಗತ್ಯ ದಾಖಲೆಗಳೊಂದಿಗೆ ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News