×
Ad

ಅಫಜಲಪುರ | ರಾಷ್ಟ್ರೀಯ ಮತದಾರರ ದಿನಾಚರಣೆ

Update: 2026-01-25 19:55 IST

ಅಫಜಲಪುರ: ಮತದಾನದ ಮಹತ್ವ ತಿಳಿದುಕೊಂಡು ಮತದಾನ ಮಾಡಿದರೆ ಮಾತ್ರ ಉತ್ತಮವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮತದಾನದ ಹಕ್ಕು ಮಾರಾಟ ಮಾಡುವ ಕಾಲಘಟ್ಟದಲ್ಲಿ ನಾವು ಇದ್ದೇವೆ, ನಾವೆಲ್ಲರೂ ಜಾಗೃತರಾಗಿ ಮತದಾನದ ಹಕ್ಕಿನಿಂದ ಸಮಾಜ ಬದಲಾವಣೆ ಮಾಡೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿನಾಯಕ ಮಾಯಣ್ಣನವರ ತಿಳಿಸಿದರು.

ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಬಿ.ಇ.ಡಿ ಕಾಲೇಜಿನಲ್ಲಿ ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಮತ್ತು ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಮಾತನಾಡಿದ ಅವರು, ಮತದಾನದ ಮಹತ್ವ ತಿಳಿದುಕೊಂಡಾಗ ಮಾತ್ರ ಸೂಕ್ತ ವ್ಯಕ್ತಿಗೆ ಸೂಕ್ತ ಸಂದರ್ಭದಲ್ಲಿ ಮತ ಚಲಾವಣೆ ಮಾಡಲು ಸಾಧ್ಯವಾಗುತ್ತದೆ,ಹೀಗಾಗಿ ಯುವಕರು ಮತದಾನದ ಮಹತ್ವ ತಿಳಿದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ಸಿವಿಲ್ ನ್ಯಾಯಾಧೀಶರಾದ ಅನೀಲ ಅಮಾತೆ ಮಾತನಾಡಿ,1950 ಜನವರಿ 25ರಂದು ಚುನಾವಣೆ ಆಯೋಗ ಸ್ಥಾಪನೆ ಮಾಡಲಾಗಿತ್ತು, 2011ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಪ್ರತಿ 10 ವರ್ಷಕೊಮ್ಮೆ ಜನಗಣತಿ ಮಾಡಿದಾಗ ಜನಸಂಖ್ಯೆ ಹೆಚ್ಚಾಗುತ್ತಿದ್ದಾರೆ,ಆದರೆ ಮತದಾನ ಮಾತ್ರ ಹೆಚ್ಚಾಗುತ್ತಿಲ್ಲ, ಆದ್ದರಿಂದ ಜನರಿಗೆ ಮತದಾನದ ಮಹತ್ವ ತಿಳಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಾ ಬರಲಾಗಿದೆ ಎಂದರು.

ತಹಶೀಲ್ದಾರ್ ಸಂಜೀವಕುಮಾರ ದಾಸರ ಮಾತನಾಡಿ, ರಾಜಕೀಯ ವ್ಯವಸ್ಥೆಯಲ್ಲಿ ಚುನಾವಣೆ ಆಯೋಗದ ಕೆಲಸ ಬಹಳ ಮಹತ್ವದ್ದಾಗಿದೆ.ರಾಷ್ಟ್ರ ಮತ್ತು ರಾಜ್ಯದಲ್ಲಿ ನಮ್ಮ ನಾಯಕರನ್ನಾಗಿ ಯಾರನ್ನೂ ಆಯ್ಕೆ ಮಾಡಬೇಕೆಂದು ಮತದಾರರ ಕೈಯಲ್ಲಿದೆ.ನನ್ನ ದೇಶ ನನ್ನ ಮತ ಎಂಬ ಸದುದ್ದೇಶದಿಂದ ಸರ್ಕಾರ ಯೋಜನೆ ರೂಪಿಸಿದೆ,18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು.ಮುಂದಿನ ದಿನಗಳಲ್ಲಿ ಜಿಪಂ,ತಾಪಂ, ಗ್ರಾಪಂ ಚುನಾವಣೆಯಲ್ಲಿ ಗ್ರಾಮ,ತಾಲೂಕು ಅಭಿವೃದ್ಧಿಗೆ ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ನಾಯಕರನ್ನಾಗಿ ಆಯ್ಕೆ ಮಾಡುವ ಹಕ್ಕು ಸಂವಿಧಾನ ನಿಮಗೆ ನೀಡಿದೆ ಎಂದರು.

ನ್ಯಾಯವಾದಿ ಕೆ.ಜಿ.ಪೂಜಾರಿ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ವಿಶೇಷವಾಗಿ ಸನ್ಮಾನ ಮಾಡಲಾಯಿತು.ತಾಲೂಕು ನ್ಯಾಯವಾದಿಗಳ ಸಂಘ ಅಧ್ಯಕ್ಷ ಎಸ್.ಎಸ್.ಪಾಟೀಲ್, ಪ್ರಾಂಶುಪಾಲ ಶಶಿಕಲಾ ಖಜೂರಿ, ಉಪನ್ಯಾಸಕ ಸದಾನಂದ ಟೇಳೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News