Afzalpur | ರೇವೂರ(ಬಿ) ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನಗಳ ಬೀಗ ಮುರಿದು ಆಭರಣ ಕಳವು

Update: 2026-08-15 22:29 IST

ಅಫಜಲಪುರ: ತಾಲೂಕಿನ ರೇವೂರ(ಬಿ) ಗ್ರಾಮದಲ್ಲಿ ಗುರುವಾರ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಕಳ್ಳರು ಚೌಡೇಶ್ವರಿ ಹಾಗೂ ಅಂಬಾಭವಾನಿ ದೇವಸ್ಥಾನಗಳ ಬೀಗ ಮುರಿದು ದೇವಿಯ ಚಿನ್ನಾಭರಣ, ಸೀರೆ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಳಿಕ ಕೆಲವು ಮನೆಗಳಿಗೂ ನುಗ್ಗಿ ಕಳ್ಳತನ ನಡೆಸಿದ್ದಾರೆ.

ಇದಲ್ಲದೆ, ಕೃಷ್ಣಾ ಗ್ರಾಮೀಣ ಬ್ಯಾಂಕ್‌ಗೆ ನುಗ್ಗಲು ಕಳ್ಳರು ಯತ್ನಿಸಿದ್ದು, ಬ್ಯಾಂಕ್‌ನ ಸೈರನ್ ಮೊಳಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ತಮ್ಮರಾಯ ಪಾಟೀಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿದೆ.

ಈ ಕುರಿತು ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News