ಅಫಜಲಪುರ: ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಪಿಎಂ ಶ್ರೀ ಸರ್ಕಾರಿ ಮಾದರಿ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕಿ ದಿಲಶಾದಬಿ ಪಟೇಲ್ ಅವರಿಗೆ ‘ಭಾರತ ಪಂಚ ರತ್ನ ರಾಷ್ಟ್ರ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಕನ್ನಡ ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಶಿಕ್ಷಣ ಕ್ಷೇತ್ರ ಹಾಗೂ ಸಮಾಜಸೇವೆಯಲ್ಲಿ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ, ಎಂ.ಎಂ. ಭಾರತ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬಾಗಲಕೋಟೆಯ ಕಾಯಕಯೋಗಿ ಡಾ. ಮಂಜುನಾಥ್ ಅಪ್ಪಾಜಿ ಸಾನ್ನಿಧ್ಯ ವಹಿಸಿದ್ದರು. ಡಾ. ಶ್ರೀ ವಿನಯ್ ಗುರೂಜಿ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಸಂಸ್ಥೆಯ ಅಧ್ಯಕ್ಷ ಡಾ. ಹುಸೇನ್ ಕೆರೂರ್, ಸಿನಿಮಾ ನಿರ್ಮಾಪಕರು, ಗಣ್ಯರು ಹಾಗೂ ಚಿತ್ರರಂಗದ ತಾರೆಯರು ಉಪಸ್ಥಿತರಿದ್ದರು.

ದಿಲಶಾದಬಿ ಪಟೇಲ್ ಅವರ ಈ ಸಾಧನೆಗೆ ಅಫಜಲಪುರ ತಾಲೂಕಿನ ಶಿಕ್ಷಕರ ಬಳಗ ಸಂತಸ ವ್ಯಕ್ತಪಡಿಸಿದೆ. ಅವರ ಸೇವೆ ಹಾಗೂ ಸಾಧನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿ ಹಾರ್ದಿಕ ಅಭಿನಂದನೆ ಸಲ್ಲಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ