ಅಫಜಲಪುರ: ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆಯ ವತಿಯಿಂದ ನೀಡಲಾಗುವ 2026ನೇ ಸಾಲಿನ ‘ಭಾರತ ಪಂಚರತ್ನ ಪ್ರಶಸ್ತಿ’ಗೆ ಪಟ್ಟಣದ ಸರ್ಕಾರಿ ಮಾದರಿ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕಿ ದಿಲಶಾದಬಿ ವಹಾಬಅಲಿ ಪಟೇಲ ಅವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.22, 2026ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಹಾರಾಣಿ ಕಾಲೇಜು ಸಮೀಪ, ವಿಧಾನಸೌಧದ ಹಿಂಭಾಗದಲ್ಲಿರುವ ಅರಮನೆ ರಸ್ತೆಯ ಈ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಿಕ್ಷಣ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಭಾರತ ಪಂಚರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿ ದಿಲಶಾದಬಿ ವಹಾಬಅಲಿ ಪಟೇಲ ಅವರಿಗೆ ಶಿಕ್ಷಣ ಕ್ಷೇತ್ರದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ