ಅಫಜಲಪುರ | ಕೈ , ರುಂಡ ಕತ್ತರಿಸಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ
ಅಫಜಲಪುರ: ತಾಲೂಕಿನ ಗೊಬ್ಬುರ(ಬಿ) ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ
ಮೃತನನ್ನು ಖಲೀಂ ಸಾಬ್(22) ಎಂದು ಗುರುತಿಸಲಾಗಿದೆ.
ಯುವಕನ ಮೃತದೇಹವು ಕೈ ಹಾಗೂ ರುಂಡ ಕತ್ತರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಈ ಕುರಿತು ತನಿಖೆಯನ್ನು ಆರಂಭಿಸಿದ್ದಾರೆ.