×
Ad

Aland | ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಕ್ರಮಕ್ಕೆ ಆಗ್ರಹಿಸಿ ಮನವಿ

Update: 2026-07-02 18:50 IST

ಆಳಂದ: ಪ್ರವಾದಿ ಮುಹಮ್ಮದ್ (ಸ) ಹಾಗೂ ಆಯೀಷಾ (ರ.ಅ) ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆಗಳು ಪ್ರಸಾರವಾಗಿವೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಹಾಗೂ ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಳಂದ ಪೀಪಲ್ ಫೋರಂ ಕಟಕಟ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರ ಮೂಲಕ ಮನವಿ ಸಲ್ಲಿಸಿದರು.

ಈ ವೇಳೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ದೇಶದ ಲಕ್ಷಾಂತರ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿರುವ ಈ ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಮನವಿಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರಗೊಂಡಿರುವ ಪಾಡ್‌ಕಾಸ್ಟ್‌ನಲ್ಲಿ ನಾಜಿಯಾ ಇಲಾಹಿ ಖಾನ್ ಅವರು ಪ್ರವಾದಿ ಮುಹಮ್ಮದ್ (ಸ) ಮತ್ತು ಆಯೀಷಾ (ರ.ಅ) ಅವರ ಕುರಿತು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪಾಡ್‌ಕಾಸ್ಟ್‌ ಅನ್ನು “ದಿವ್ಯಾಸಿಂಗ್ 4043” ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಪ್ರಸಾರ ಮಾಡಲಾಗಿದ್ದು, ಇದರಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಯಾವುದೇ ಧರ್ಮದ ಪೂಜ್ಯ ವ್ಯಕ್ತಿಗಳು ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವ ಹೇಳಿಕೆಗಳು ಸಮಾಜದಲ್ಲಿ ಕೋಮು ಸೌಹಾರ್ದತೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News