ಆಳಂದ: ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿರುವುದನ್ನು ಖಂಡಿಸಿ, ಜಗಜ್ಯೋತಿ ಬಸವ ಅಭಿಮಾನಿಗಳ ಆಳಂದ ಘಟಕದ ಪದಾಧಿಕಾರಿಗಳು ಪಟ್ಟಣದ ಬಸವೇಶ್ವರ ಚೌಕ್‌ನಲ್ಲಿರುವ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಳಿಕ ಆಳಂದ ಪೊಲೀಸ್ ಠಾಣೆಗೆ ತೆರಳಿ ರವಿ ಹಂಜ ವಿರುದ್ಧ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಬಸವಣ್ಣನವರ ವಿಚಾರಧಾರೆ ಹಾಗೂ ಸಮಾಜದ ಭಾವನೆಗಳಿಗೆ ಧಕ್ಕೆ ತರುವಂತಹ ಬರಹಗಳನ್ನು ಸಹಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಾದೇವ ಹತ್ತಿ, ಲಿಂಗರಾಜ ಪಾಟೀಲ, ಶ್ರೀಶೈಲ ಖಜೂರಿ, ಮಲ್ಲಿನಾಥ ಹತ್ತರಕಿ, ಕಲ್ಲಪ್ಪ ಹತ್ತರಕಿ, ದೋಲಪ್ಪ ವನದೆ, ಸಿದ್ಧುಗೌಡ ಮಗ್ಗಿ, ಮಹೇಶ ಗವಳಿ, ಸಿದ್ದು ಹಿರೋಳಿ, ಚನ್ನಪ್ಪ ಹತ್ತರಕಿ, ಸಂತೋಷ ವಾಲೆ, ಸಂತೋಷ ಹತ್ತಿ ಹಾಗೂ ಮಹಾದೇವ ಹಡಪದ ಸೇರಿದಂತೆ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ