ಆಳಂದ |16 ಜನರಿಗೆ ಉಚಿತ ಕನ್ನಡಕ ವಿತರಣೆ
Update: 2025-03-26 11:03 IST
ಕಲಬುರಗಿ: ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಘಟಕ ಕಾರ್ಮೆಲ್ ಸನ್ನಿಧಿ ಸಮಾಜ ಸೇವಾ ಸಂಸ್ಥೆ ಕಡಗಂಚಿ, ದ್ರಷ್ಟಿ ಕಣ್ಣಿನ ಆಸ್ಪತ್ರೆ ಕಲಬುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಕಲಬುರಗಿ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿ ಅಳಂದ್ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ ದೃಷ್ಟಿ ಸಮಸ್ಯೆ ಹೊಂದಿದ್ದ ಅಳಂದ್ ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹದಿನಾರು ಬಡ ಜನರಿಗೆ ಬೈಫೋಕಲ್ ಕನ್ನಡಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಫಾ. ವಿಲಿಯಂ ಮಿರಾಂದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಜೆ.ವಿ.ಕೆಯ ರೇಣುಕಾ, ಸೇವಾ ಪ್ರತಿನಿಧಿ ಸುವರ್ಣ, ಬ್ರ. ಮೆಲ್ರಿಕ್ ಹಾಗೂ ಇತರರು ಉಪಸ್ಥಿತರಿದ್ದರು.