ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ | ಜೇವರ್ಗಿಯಲ್ಲಿ ಜಾಥಾಕ್ಕೆ ಚಾಲನೆ
Update: 2026-07-08 20:38 IST
ಕಲಬುರಗಿ: ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜೇವರ್ಗಿ ಕೋರ್ಟ್ ನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ಜೇವರ್ಗಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ತಯ್ಯಬಾ ಸುಲ್ತಾನಾ ಅವರು ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸರ್ಕಾರಿ ಅಭಿಯೋಜಕರು, ಹಿರಿಯ ಕಾರ್ಮಿಕ ನಿರೀಕ್ಷಕ ಕೆ ಎಸ್ ಪ್ರಸನ್ನ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠಲ ಚಿಕಣಿ, ಮಾರ್ಗದರ್ಶಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ ಸಂಸ್ಥೆಯವರು ಮತ್ತು ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಉಪಸ್ಥಿತರಿದ್ದರು.