×
Ad

ಕಲಬುರಗಿ | ʼಶುಲ್ಕ ಮರುಪಾವತಿʼ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ; ಕೊನೆಯ ದಿನಾಂಕ ವಿಸ್ತರಣೆ

Update: 2025-03-11 21:33 IST

ಕಲಬುರಗಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ  ʼಶುಲ್ಕ ಮರುಪಾವತಿʼ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 2025ರ ಮಾ.30 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ ಕೆಲ ಕೋರ್ಸ್‍ಗಳಿಗೆ ಕೌನ್ಸಲಿಂಗ್ ತಡವಾಗಿ ಪ್ರಾರಂಭವಾಗಿರುವ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ನೀಡಿದ ಕಾರಣ ಇಲಾಖೆಯಿಂದ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಈ ಕೋರ್ಸ್‍ಗಳ ವಿದ್ಯಾರ್ಥಿಗಳು ಇಲಾಖೆಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಆನ್‍ಲೈನ್ ಮೂಲಕ https://ssp.postmatric.karnataka.gov.in ವೆಬ್‍ಸೈಟ್‍ದಲ್ಲಿ 2025ರ ಮಾ.30 ರವರೆಗೆ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮಾ.15ಕ್ಕೆ ನಿಗದಿಪಡಿಸಲಾಗಿತ್ತು. ಸದರಿ ಅರ್ಜಿಗಳಿಗೆ ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಿದ್ದಲ್ಲಿ 2023-24ನೇ ಸಾಲಿಗೆ ಶುಲ್ಕ ಮರುಪಾವತಿ ಮಾಡಲು ಕ್ರಮ ವಹಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902ಗೆ ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News