ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶರಣು ಪಾಟೀಲ ಮೋತಕಪಲ್ಲಿ
ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ವತಿಯಿಂದ 2025-26ನೇ ಸಾಲಿನ ಎಸೆಸೆಲ್ಸಿ (SSLC) ಹಾಗೂ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಬಿ. ಖಂಡ್ರೆ ಅವರ ಅನುಮತಿ ಮೇರೆಗೆ ಈ ಪ್ರಕಟಣೆ ಹೊರಡಿಸಲಾಗಿದೆ ಎಂದು ತಾಲೂಕು ಅಧ್ಯಕ್ಷರಾದ ಶರಣು ಪಾಟೀಲ ಮೋತಕಪಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಮಹಾಸಭೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.
ಆನ್‌ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಂಚೆ, ಕೊರಿಯರ್ ಅಥವಾ ಖುದ್ದಾಗಿ ತಂದು ನೀಡುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದೆ.
ಹೆಚ್ಚಿನ ಮಾಹಿತಿಗಾಗಿ ಮಹಾಸಭೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.