ಸೇಡಂ | ಮೆಟ್ರಿಕ್ ನಂತರದ ವಸತಿ ನಿಲಯಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ : ಸೇಡಂ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ [ಪಿ.ಯು.ಸಿ ಮತ್ತು ಪಿ.ಯು ಸಮಾನಂತರ ಕೋರ್ಸಿನ ವಿದ್ಯಾರ್ಥಿಗಳಿಗೆ] ವಸತಿ ನಿಲಯಗಳಲ್ಲಿ 2025-26ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಗೆ ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ನಂತರ ವಿದ್ಯಾರ್ಥಿಯ ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ಧೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಚಾರ್ಯರಿಂದ ಧೃಢೀಕರಿಸಿ ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿಜೂನ್ 20 ರೊಳಗಾಗಿ ಅರ್ಜಿ ಸಲ್ಲಿಸಿ, ಸ್ವೀಕೃತಿ ಪಡೆಯಬೇಕು. ಒಂದು ವೇಳೆ ನಿಗಧಿತ ದಿನಾಂಕದೊಳಗೆ ದಾಖಲೆ ಸಲ್ಲಿಸದಿದ್ದಲ್ಲಿ ಅಂತಹ ಅರ್ಜಿ ಅನುರ್ಜಿತಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‍ಸೈಟ್‍ನ್ನು ಹಾಗೂ ಸೇಡಂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.