×
Ad

ನಾಡಹಬ್ಬ ಉದ್ಘಾಟನೆಗೆ ಬಾನು ಮುಷ್ತಾಕ್ ಒಪ್ಪಿಕೊಂಡಿರುವುದು ಸ್ವಾಗತಾರ್ಹ : ಶಾಸಕ ಬಿ.ಆರ್.ಪಾಟೀಲ್

Update: 2025-08-28 15:40 IST

ಬಿ.ಆರ್.ಪಾಟೀಲ್

ಕಲಬುರಗಿ: ಮೈಸೂರಿನಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಉತ್ಸವದ ಉದ್ಘಾಟನೆಗೆ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರಕಾರ ಆಹ್ವಾನಿಸಿರುವುದಕ್ಕೆ ಬಿಜೆಪಿ ಜಾತಿ-ಧರ್ಮದ ಭೇದಭಾವದ ಬೀಜ ಬಿತ್ತುವ ನಿಲುವನ್ನು ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್ ಖಂಡಿಸಿದ್ದಾರೆ.

ಬಾನು ಮುಷ್ತಾಕ್ ಅವರು ಜಾಗತಿಕ ಮಟ್ಟದಲ್ಲಿ ಬೂಕರ್ ಪ್ರಶಸ್ತಿಯನ್ನು ಗಳಿಸಿ, ಕರ್ನಾಟಕದ ಗೌರವವನ್ನು ಜಗತ್ತಿನ ವೇದಿಕೆಯಲ್ಲಿ ಎತ್ತಿಹಿಡಿದಿದ್ದಾರೆ. ಆದರೂ, ಬಿಜೆಪಿ ಯಾವತ್ತೂ ಶಾಂತಿ-ಸೌಹಾರ್ದತೆಯನ್ನು ಬಯಸದೇ, ಅನಾವಶ್ಯಕ ಧಾರ್ಮಿಕ ವಿಷಯಗಳನ್ನು ಎಳೆದು ತಂದು ಒಂದು ಸಮುದಾಯಕ್ಕೆ ಅವಮಾನ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿದ್ದಾರೆ.

ನಾಡಹಬ್ಬ ಉದ್ಘಾಟನೆಗೆ ಬಾನು ಮುಷ್ತಾಕ್ ಒಪ್ಪಿಕೊಂಡಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಪ್ರತಿಯೊಬ್ಬರಿಗೂ ತಮ್ಮ ನಂಬಿಕೆ-ಆಚಾರಗಳನ್ನು ಪಾಲಿಸುವ ಹಕ್ಕು ಸಂವಿಧಾನದಲ್ಲೇ ಇದೆ. ಈ ಹಿಂದೆ ನಾಡಿನ ಖ್ಯಾತ ಕವಿ ನಿಸಾರ್ ಅಹ್ಮದ್ ಅವರು ದಸರಾ ಉತ್ಸವವನ್ನು ಉದ್ಘಾಟಿಸಿದ್ದು, ಇವರಿಗೆ ನೆನಪಿಲ್ಲವೇ?‌. ಇಂತಹ ಹೇಳಿಕೆಗಳಿಂದ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಅವಮಾನವಾಗುತ್ತದೆ ಎಂದು ತಿಳಿಸಿದ್ದಾರೆ.

ನಾಡಿನಲ್ಲಿ ಮಳೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಬಡ ಮಕ್ಕಳ ಶಿಕ್ಷಣ, ದಲಿತರ, ಕಾರ್ಮಿಕರು ಹಾಗೂ ಹಿಂದುಳಿದವರ ಸಮಸ್ಯೆಗಳ ಬಗ್ಗೆ ಮೌನವಾಗಿರುವ ಬಿಜೆಪಿ, ಜಾತಿ-ಧರ್ಮದ ರಾಜಕೀಯದ ಸುತ್ತ ಮಾತ್ರ ತಿರುಗಾಡುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಇದನ್ನು ಸಾರ್ವಜನಿಕರು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News