ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಸನಗೌಡ ದದ್ದಲ್ ನೇಮಕ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ನವೆಂಬರ್ 24ರಂದು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಸನಗೌಡ ದದ್ದಲ್ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಅವರು ನವೆಂಬರ್ 28ರಂದು ಬೆಳಗ್ಗೆ 10 ಗಂಟೆಗೆ ಕಲಬುರಗಿಯಲ್ಲಿರುವ ಮಂಡಳಿಯ ಕಚೇರಿಯಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಲಿದ್ದಾರೆ ಎಂದು ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ತಿಳಿಸಿದ್ದಾರೆ.