ಕಲಬುರಗಿ: ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಕಾರ್ಯಾಧ್ಯಕ್ಷರಾಗಿ ಸಂಘಟಕ ರವೀಂದ್ರಕುಮಾರ ಭಂಟನಳ್ಳಿ ಹಾಗೂ ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷರನ್ನಾಗಿ ಸಾಂಸ್ಕೃತಿಕ ಸಂಘಟಕ ಶಿವರಾಜ ಎಸ್ ಅಂಡಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅಕಾಡೆಮಿ ಹಾಗೂ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಬಸವಾದಿ ಶರಣರ ವಚನ ಸಾಹಿತ್ಯದ ಅಶಯಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ಸಂಘಟಿಸಿ ಹೊಸ ಪೀಳಿಗೆಯಲ್ಲಿ ವಚನ ಸಾಹಿತ್ಯ ಅರಿವು ಮೂಡಿಸಬೇಕೆಂದು ಮತ್ತು ಜಿಲ್ಲೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಇನ್ನೂ ಹೆಚ್ಚು ಆಯೋಜಿಸುವ ಮೂಲಕ ಈ ನೆಲದ ಹಿರಿಮೆ-ಗರಿಮೆಯನ್ನು ಹೊಸ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಬೇಕೆಂದು ಅವರು ಹೇಳಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ