×
Ad

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Update: 2024-03-23 08:32 IST

Photo: fb.com/priyankkharge

ಕಲಬುರಗಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿಯು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬಗ್ಗೆ  ವರದಿಯಾಗಿದೆ.

ಬಿಜೆಪಿಯ ರಾಜ್ಯ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ತಂಡವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಇಷ್ಟು ದಿನ ಈಡಿ ಏನು ಮಾಡುತ್ತಿತ್ತು. ಚೋರ್ ಗುರು ಚಾಂಡಾಲ ಶಿಷ್ಯರ ಆದೇಶಕ್ಕಾಗಿ ಕಾಯುತ್ತಿತ್ತು ಎಂದು ತಮ್ಮ ಎಕ್ಸ್ ಖಾತೆಯಿಂದ ಪ್ರಿಯಾಂಕ್ ಖರ್ಗೆಯವರು ಕಳೆದ ಗುರುವಾರದಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News