×
Ad

"ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸ್ತಾ ಇದೆ": ಬಿಜೆಪಿ ‌ನಾಯಕ ಎನ್.ರವಿಕುಮಾರ್ ವಿವಾದಾತ್ಮಕ ಹೇಳಿಕೆ

Update: 2025-05-25 17:00 IST

ಎನ್.ರವಿಕುಮಾರ್ 

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿ ಕೂಡ ಕಾಂಗ್ರೆಸ್ ನವರು ಹೇಳಿದ ಹಾಗೆ ಕೇಳುತ್ತಾ ಇದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತಿದೆ ಎಂದು ಬಿಜೆಪಿ ಎಂಎಲ್ಸಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ 'ಕಲಬುರಗಿ ಚಲೋ' ಪ್ರತಿಭಟನೆಯಲ್ಲಿ ಮಾತನಾಡಿದ ಎನ್.ರವಿಕುಮಾರ್, "ಕಲಬುರಗಿ ಡಿಸಿ ಕಚೇರಿ ಕೂಡ ಸ್ವಾತಂತ್ರ್ಯವನ್ನು ಕಳೆದುಕೊಂಡು ಬಿಟ್ಟಿದೆ. ಡಿಸಿ ಮೇಡಂ ಕೂಡ ಅವರು ಹೇಳಿದಂತೆ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ ನನಗೆ. ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಡಿಸಿ ಅವರು ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತದೆ" ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯವರನ್ನು ಈ ರೀತಿ ಅಪಮಾನಿಸಿರುವ ಎನ್.ರವಿಕುಮಾರ್ ಅವರ ಹೇಳಿಕೆಯನ್ನು ಹಲವು ಪ್ರಗತಿಪರ ಸಂಘಟನೆಗಳ ನಾಯಕರು ಖಂಡಿಸಿದ್ದಾರೆ. ರವಿಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಡಾ.ಫೌಝಿಯಾ ತರನ್ನುಮ್‌ ಅವರು ಕಲಬುರಗಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News