×
Ad

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ‌ನಾಯಕ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ತೆಹ್ರಿಕ್ ಎ ನಿಸಾ ಸಂಘಟನೆ ಆಗ್ರಹ

Update: 2025-05-26 22:17 IST

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಂತೆ ಕಾಣುತ್ತೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತೆಹ್ರಿಕ್ ಎ ನಿಸಾ ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿ, ರವಿಕುಮಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರಿಗೆ ಚುನಾವಣೆ ವೇಳೆ ಉತ್ತಮ ಅಡಳಿತ ವ್ಯವಸ್ಥೆ ನಿರ್ವಹಣೆಗಾಗಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದು ಜಿಲ್ಲೆಯ ಮೆಚ್ಚಿನ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಇದನ್ನು ಸಹಿಸಿಕೊಳ್ಳದ ಎನ್.ರವಿಕುಮಾರ್ ರಂತಹ ಬಿಜೆಪಿ ಮತಿವಾದಿ ನಾಯಕರು ಹತಾಶರಾಗಿ ಮಹಿಳಾ ಅಧಿಕಾರಿಯನ್ನು ಅಪಮಾನ ಮಾಡುತ್ತಿದ್ದಾರೆ. ಇಂತಹ ನಾಯಕರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕೆಂದು ಓತ್ತಾಯಿಸಿದ್ದಾರೆ.

ಈ ಸಂದರ್ಭಲ್ಲಿ ಡಾ.ರಬಿಯಾ ಖಾನಂ, ಶಹನಾಜ್ ಅಖ್ತರ್, ಡಾ. ರಯೀಸಾ ಫಾತೀಮಾ, ವಾಜೀದಾ ಮಬೀನ್, ಸಬೇರಾ ಬೇಗಂ, ಆಯೇಷಾ ಬೇಗಂ, ರೂಹಿ, ನಜ್ಮಾ, ನಿಖತ್, ಮಕ್ತುಂಬಿ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News