SCP/TSP ಹಣ ದಲಿತರ ಅಭಿವೃದ್ಧಿಗೆ ಮರಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Update: 2025-03-05 13:54 IST
ಕಲಬುರಗಿ: ಕಾಂಗ್ರೆಸ್ ಸರ್ಕಾರದಿಂದ SCP/TSP ಅನುದಾನ ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಎಸ್ ವಿಪಿ ವೃತ್ತದಲ್ಲಿ ಸಂಸದ ಗೋವಿಂದ ಕಾರಜೋಳ ನೈತೃತ್ವದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ಧಿಕ್ಕಾರ ಕೂಗುತ್ತಾ ಬಜೆಪಿ ಕಾರ್ಯಕರ್ತರೊಂದಿಗೆ ಆಗಮಿಸಿದ ಮುಖಂಡರು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ SCP/TSP ಹಣ ದಲಿತರ ಅಭಿವೃದ್ಧಿಗೆ ಮರಳಿಸಲು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ ಜಾಧವ್, ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ್ ತೆಲ್ಕೂರ, ದತ್ತಾತ್ರೇಯ ಪಾಟೀಲ್ ರೇವೂರ್, ಶಾಸಕ ಬಸವರಾಜ್ ಮತ್ತಿಮಡು, ಚಂದು ಪಾಟೀಲ್ , ಶಿವರಾಜ ಪಾಟೀಲ್ ರದ್ದೆವಾಡಗಿ, ಅಮರನಾಥ ಪಾಟೀಲ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.