ʼಗ್ಯಾರಂಟಿʼ ಯೋಜನೆಗಳನ್ನು ಸ್ಥಗಿತಗೊಳಿಸಲು ಬಿಜೆಪಿಯಿಂದ ಹುನ್ನಾರ : ಸಚಿವ ಪ್ರಿಯಾಂಕ್ ಖರ್ಗೆ

Update: 2024-04-27 14:19 GMT

ಕಲಬುರಗಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆದರೆ, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಹುನ್ನಾರ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಶನಿವಾರ ಚಿತ್ತಾಪುರ ಮತಕ್ಷೇತ್ರದ ಭೀಮನಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿ ಅವರು ಮಾತನಾಡಿದರು.

ರಾಜ್ಯದ ಜನರ ಕುಟುಂಬದ ನಿರ್ವಹಣೆ ಹಾಗೂ ಆರ್ಥಿಕ ಸ್ಥಿರತೆ ರೂಪಿಸುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಕೋರಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ ನಾಯಕರೇ, ಕಾಂಗ್ರೆಸ್ ಸರಕಾರದ ಬಡವರ ಪರ ಕಾರ್ಯಕ್ರಮಗಳನ್ನು ನಿಲ್ಲಿಸುವ ಯತ್ನ ಮಾಡಿದ್ದೀರಲ್ಲ. ಬಡವರು ಕಂಡರೆ ಯಾಕೆ ನಿಮಗೆ ಅಸಮಾಧಾನ? ನಾವು ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News