×
Ad

ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ : ಪರಿಶೀಲನೆ

Update: 2025-09-17 21:37 IST

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಿರಂತರ ಸುರಿದ ಭಾರೀ ಮಳೆಯಿಂದ ತೊಗರಿ, ಹೆಸರು ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ, ಫಸಲ್ ಬೀಮಾ ಯೋಜನೆ ಮತ್ತು ಇತರ ವಿಮಾ ಯೋಜನೆಗಳಡಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವರಾಜ್ ಮುತ್ತಿಮಡು, ಮಾಜಿ ಎಂಎಲ್ಸಿ ಅಮರನಾಥ್ ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮುಖಂಡ ನಿತಿನ್ ಗುತ್ತೇದಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News