ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಎರಡನೇ ಅವಧಿಗೂ ರಾಜ್ಯಾಧ್ಯಕ್ಷರನ್ನಾಗಿ ಮುಂದುವರಿಸಬೇಕೆಂದು ಆಗ್ರಹಿಸಿ, ನಗರದ ಆನಂದ್ ಕಣಸೂರ್ ಅವರು ತಮ್ಮ ರಕ್ತದಿಂದ ಪತ್ರ ಬರೆದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನಗರದ ಜಗತ್ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಮೂರ್ತಿಯ ಮುಂಭಾಗದಲ್ಲಿ, ವಿಜಯೇಂದ್ರ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಗಮನ ಸೆಳೆದರು.

ಈ ಸಂದರ್ಭದಲ್ಲಿ ರಮೇಶ್ ತೆಗ್ಗಿನಮನಿ, ಮಂಜು ವಾರದ್, ಕಿರಣ್ ಕಣ್ಣಿ, ಅಣ್ಣಾರಾಯ್ ಹಿರೇಗೌಡ, ವೀರೇಶ್ ತೊಂಡಕಲ್, ರಾಜಶೇಖರ್ ಬೋಲೇವಾವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor