ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ : ಕಲಬುರಗಿ ನಗರದ ವಿವಿಧೆಡೆ ತಪಾಸಣೆ
Update: 2025-11-11 11:50 IST
ಕಲಬುರಗಿ : ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟಗೊಂಡಿರುವ ಬೆನ್ನಲ್ಲೇ ಕಲಬುರಗಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ವಿವಿಧೆಡೆ ತಪಾಸಣೆ ನಡೆಸಲಾಗಿದೆ.
ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಸಲಾಗಿದೆ.
ಪೊಲೀಸ್ ಸಿಬ್ಬಂದಿಯವರು ಆಯಾ ಸ್ಥಳಗಳಲ್ಲಿ ಸಾರ್ವಜನಿಕರ ಬ್ಯಾಗ್, ವಸ್ತುಗಳ ತಪಾಸಣೆ ನಡೆಸಿದ್ದಾರೆ.