ಯಡ್ರಾಮಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2026-08-06 18:18 IST

ಸಾಂದರ್ಭಿಕ ಚಿತ್ರ

ಯಡ್ರಾಮಿ: ಪಟ್ಟಣದ ಹೊರವಲಯದ ವಡಗೇರಾದಿಂದ ಯಡ್ರಾಮಿಗೆ ಸಂಪರ್ಕಿಸುವ ರಸ್ತೆಯ ಸಮೀಪದ ಹೊಲವೊಂದರಲ್ಲಿ ಕರಿ ಜಾಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಸ್ಥಳೀಯರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಶೈಲ್ ಅಂಬಾಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ವ್ಯಕ್ತಿಗೆ ಸುಮಾರು 40 ರಿಂದ 45 ವರ್ಷ ವಯಸ್ಸಿರಬಹುದೆಂದು ಅಂದಾಜಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಡ್ರಾಮಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಹಾಗೂ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News