ಯುವಜನರು, ಮಹಿಳೆಯರ ಅಭಿವೃದ್ಧಿ ಪರ ಬಜೆಟ್: ಶಿವ್ ಅಷ್ಠಗಿ
Update: 2026-02-01 19:41 IST
ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಯುವ, ಮಹಿಳಾ ಅಭಿವೃದ್ಧಿ ಪರವಾಗಿದೆ ಎಂದು ಬಿಜೆಪಿ ಯುವ ಮುಖಂಡ. ಶಿವ ಅಷ್ಟಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಐತಿಹಾಸಿಕ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು 'ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್' ಉಪಕ್ರಮವನ್ನು ಘೋಷಿಸಿದ್ದಾರೆ. ಈ ಯೋಜನೆಯು ಖಾದಿ, ಕೈಮಗ್ಗ ಮತ್ತು ಕರಕುಶಲ ಉದ್ಯಮಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸುವ ಮೂಲಕ ನಮ್ಮ ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳಿಗೆ ಹೊಸ ಶಕ್ತಿ ನೀಡಲಿದೆ. ಇದರಿಂದ ಗ್ರಾಮೀಣ ಭಾರತದ ಯುವ ಜನತೆ ಮತ್ತು ಮಹಿಳಾ ಯುವ ಉದ್ಯಮಕ್ಕೆ ನವ ಉತ್ತೇಜನ ಮತ್ತು ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹೊಸ ಆಯಾಮ ನೀಡಲಿದೆ ಎಂದು ತಿಳಿಸಿದ್ದಾರೆ.